• Feb 14, 2026
  • NPN Log
    ಹರಿಯಾಣದ ಅಂಬಾಲದಲ್ಲಿ ಕುಡಿದ ಮತ್ತಿನಲ್ಲಿದ್ದ ಪೊಲೀಸ್ ಅಧಿಕಾರಿಯೊಬ್ಬರ ಕಾರು ಇ-ರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ಅದರಲ್ಲಿದ್ದ 25 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಮೊದಲು ಆಟೋಗೆ ಕಾರು ಡಿಕ್ಕಿ ಹೊಡೆದಾಗ ಆ ಮಹಿಳೆ ಕೆಳಗೆ ಬಿದ್ದಿದ್ದಾರೆ. ಆದರೂ ನಿಲ್ಲಿಸದ ಪೊಲೀಸ್ ಆಕೆಯ ಮೇಲೆ ಕಾರು ಹತ್ತಿಸಿಕೊಂಡು ಹೋಗಿದ್ದಾರೆ. ಇದರಿಂದ ತೀವ್ರ ಗಾಯಗಳಾಗಿ ಆಕೆ ಮೃತಪಟ್ಟಿದ್ದಾರೆ. ಅಂಬಾಲ, ಫೆಬ್ರವರಿ 12: ಹರಿಯಾಣದ ಅಂಬಾಲದಲ್ಲಿ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸುತ್ತಿದ್ದ ಹರಿಯಾಣದ ಪೊಲೀಸ್ ಅಧಿಕಾರಿಯೊಬ್ಬರು 25 ವರ್ಷದ ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ಆ ಮಹಿಳೆ ಸಾವನ್ನಪ್ಪಿದ್ದಾರೆ. ಮಹಿಳೆ ಇ-ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದಾಗ ಪೊಲೀಸ್ ಅಧಿಕಾರಿ ಚಲಾಯಿಸುತ್ತಿದ್ದ ಕಾರು ಡಿಕ್ಕಿ (Car Accident) ಹೊಡೆದ ಪರಿಣಾಮದಿಂದಾಗಿ ಈ ಘಟನೆ ನಡೆದಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ರಸ್ತೆಗೆ ಬಿದ್ದಿದ್ದು, ನಂತರ ಕಾರು ಆಕೆಯ ಮೇಲೆ ಹರಿದಿದೆ. ಮೃತಳನ್ನು ನಿಕಿತಾ ಎಂದು ಗುರುತಿಸಲಾಗಿದೆ. ಅಂಬಾಲದ ಕಾಳಿ ಪಲ್ಟನ್ ಸೇತುವೆ ಬಳಿ ಬುಧವಾರ ರಾತ್ರಿ ಈ ಘಟನೆ ನಡೆದಿದ್ದು, 9 ಗಂಟೆ ಸುಮಾರಿಗೆ ಆ ಮಹಿಳೆ ಇ-ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದಾಗ, ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಬಳಿಕ ಆಕೆಯ ಮೇಲೆ ಕಾರು ಹಾದುಹೋಯಿತು. ಇದರಿಂದ ಅವರಿಗೆ ಗಂಭೀರ ಗಾಯಗಳಾಗಿದ್ದು, ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರು ಸಾವನ್ನಪ್ಪಿದರು. ಈ ಘಟನೆಯ ಸಮಯದಲ್ಲಿ ಪೊಲೀಸ್ ಅಧಿಕಾರಿ ಕುಡಿದಿದ್ದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಅಪಘಾತದ ನಂತರ, ಅಲ್ಲಿ ಜಮಾಯಿಸಿದ್ದ ಸ್ಥಳೀಯರು ಅವರನ್ನು ಹಿಡಿದಿದ್ದಾರೆ. ನಂತರ, ಅವರನ್ನು ಪೊಲೀಸರಿಗೆ ಹಸ್ತಾಂತರಿಸಲಾಯಿತು. ಪೊಲೀಸ್ ಅಧಿಕಾರಿಗಳು ತನಿಖೆಯನ್ನು ಪ್ರಾರಂಭಿಸಿದ್ದಾರೆ. “ನಾನು ಅಂಬಾಲಾ ಕಂಟೋನ್ಮೆಂಟ್‌ನಿಂದ ಇ-ರಿಕ್ಷಾದಲ್ಲಿ ನಾಲ್ವರು ಪ್ರಯಾಣಿಕರೊಂದಿಗೆ ಬರುತ್ತಿದ್ದೆ. ವೇಗವಾಗಿ ಬಂದ ಪೊಲೀಸ್ ಅಧಿಕಾರಿಯೊಬ್ಬರ ಕಾರು ನಮ್ಮ ಇ-ರಿಕ್ಷಾಗೆ ಡಿಕ್ಕಿ ಹೊಡೆಯಿತು. ಆಗ ನಮ್ಮ ಆಟೋದಲ್ಲಿದ್ದ ಒಬ್ಬಳು ಹುಡುಗಿ ಅದರಿಂದ ಬಿದ್ದಳು. ನಂತರ, ಪೊಲೀಸ್ ಅಧಿಕಾರಿ ಆ ಹುಡುಗಿಯ ಮೇಲೆ ಕಾರು ಹತ್ತಿಸಿಕೊಂಡು ಹೋದರು. ಆಕೆಯನ್ನು ಆಸ್ಪತ್ರೆಗೆ ಕರೆತರುವಾಗ ಆಕೆ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ಪೊಲೀಸ್ ಅಧಿಕಾರಿ ಕುಡಿದಿದ್ದರು,” ಎಂದು ಇ-ರಿಕ್ಷಾ ಚಾಲಕ ರವೀಂದರ್ ಸಿಂಗ್ ತಿಳಿಸಿದ್ದಾರೆ.

    You Might Also Like

    Comments

    Leave A Comment

    Don’t worry ! Your email address will not be published. Required fields are marked (*).

    Get Newsletter

    Featured News

    Advertisement

    Voting Poll (Checkbox)

    Voting Poll (Radio)

    Readers Opinion