• Feb 14, 2026
  • NPN Log
    ಆಳಂದದ ವಿವಾದಿತ ಲಾಡ್ಲೆ ಮಶಾಕ್ ದರ್ಗಾದಲ್ಲಿ (Ladle Mashak Dargah Aland) ಶಿವಲಿಂಗ ಪೂಜೆಗೆ ಕೋರ್ಟ್​ ಗ್ರೀನ್ ಸಿಗ್ನಲ್ ನೀಡಿದೆ. ದರ್ಗಾದಲ್ಲಿರುವ ರಾಘವ ಚೈತನ್ಯ ಶಿವಲಿಂಗಕ್ಕೆ ಶಿವರಾತ್ರಿ ನಿಮಿತ್ತ ಪೂಜೆಗೆ ನ್ಯಾಯಾಲಯ ಅನುಮತಿ ನೀಡಿದೆ. ಆದರೂ ಹಿಂದೂ ಸಂಘಟನೆಗಳಿಗೆ ನಿರಾಸೆಯಾಗಿದೆ. ಹಾಗಾದ್ರೆ, ಪೂಜೆಗೆ ಕೋರ್ಟ್ ನೀಡಿರುವ ಸೂಚನೆಗಳೇನು? ಎನ್ನುವ ವಿವರ ಇಲ್ಲಿದೆ. ಕಲಬುರಗಿ, (ಫೆಬ್ರವರಿ 11): ಆಳಂದದ ವಿವಾದಿತ ಲಾಡ್ಲೇ ಮಶಾಕ್ ದರ್ಗಾದಲ್ಲಿರುವ (Ladley Mashak Dargah) ಶಿವಲಿಂಗಕ್ಕೆ ಶಿವರಾತ್ರಿಯಂದು (Shivaratri) ಪೂಜೆ ಸಲ್ಲಿಸಲು ಕಲಬುರಗಿ ಹೈಕೋರ್ಟ್‌ ​ ಪೀಠ (Kalaburagi High Court Bench) ಅನುಮತಿ ನೀಡಿದೆ. ಫೆಬ್ರವರಿ 15ರ ಮಧ್ಯಾಹ್ನ 2 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪೂಜೆ ಸಲ್ಲಿಸಲು ಕೇವಲ ಒಬ್ಬರಿ ಅದರು ಅರ್ಜಿದಾರ ಸಿದ್ರಾಮಯ್ಯ ಹಿರೇಮಠ ಎಂಬುವರಿಗೆ ಮಾತ್ರ ಅವಕಾಶ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಹಾಗೇ ಪೂಜೆ ಸಲ್ಲಿಸಲು ತೆರಳುವ ಅರ್ಜಿದಾರರಿಗೆ ಭದ್ರತೆ ಕಲ್ಪಿಸಬೇಕು. ಒಂದು ವೇಳೆ ಕಾನೂನು ಸುವ್ಯವಸ್ಥೆ ಉಲ್ಲಂಘಿಸಿದ್ರೆ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ. ಫೆಬ್ರವರಿ 15ರಂದು ಮಹಾಶಿವರಾತ್ರಿಯಂದು ಲಾಡ್ಲೆ ಮಶಾಕ್ ದರ್ಗಾದಲ್ಲಿರುವ ಶಿವಲಿಂಗಕ್ಕೆ ಪೂಜೆ ಮಾಡಲು 15 ಜನರಿಗೆ ಅನುಮತಿ ನೀಡುವಂತೆ ಹಿಂದೂ ಸಂಘಟನೆಗಳು ಕಲಬುರಗಿ ಹೈಕೋರ್ಟ್ ಪೀಠಕ್ಕೆ ಅರ್ಜಿ ಸಲ್ಲಿಸಿದ್ದವು. ಈ ಅರ್ಜಿ ವಿಚಾರನೆ ನಡೆಸಿದ ಕೋರ್ಟ್, ಕೇವಲ ಒಬ್ಬರಿಗೆ ಅದು ದೂರುದಾರ ಸಿದ್ರಾಮಯ್ಯ ಹಿರೇಮಠ ಎಂಬುವರಿಗೆ ಮಾತ್ರ ಪೂಜೆ ಸಲ್ಲಿಸಲು ಅವಕಾಶನ ನೀಡಿ ಆದೇಶಿಸಿದೆ. ಇದರೊಂದಿಗೆ 15 ಜನರಿಗೆ ಅನುಮತಿ ಕೋರಿದ್ದ ಹಿಂದೂ ಸಂಘಟನೆಗಳಿಗೆ ನಿರಾಸೆಯಾಗಿದೆ.

    You Might Also Like

    Comments

    Leave A Comment

    Don’t worry ! Your email address will not be published. Required fields are marked (*).

    Get Newsletter

    Featured News

    Advertisement

    Voting Poll (Checkbox)

    Voting Poll (Radio)

    Readers Opinion