ಸೂರ್ಯಕುಮಾರ್ 84*: ಭಾರತಕ್ಕೆ ಟಿ20 WC ಗೆಲುವು
Suryakumar Yadav Heroics: 2026ರ ಟಿ20 ವಿಶ್ವಕಪ್‌ನಲ್ಲಿ ಅಮೆರಿಕ ವಿರುದ್ಧ ಭಾರತದ ಆರಂಭ ಉತ್ತಮವಾಗಿರಲಿಲ್ಲ, ಪ್ರಮುಖ ವಿಕೆಟ್‌ಗಳು ಪವರ್‌ಪ್ಲೇನಲ್ಲೇ ಪತನಗೊಂಡವು. ನಾಯಕ ಸೂರ್ಯಕುಮಾರ್ ಯಾದವ್ ಏಕಾಂಗಿ ಹೋರಾಟ ನಡೆಸಿ 84* ರನ್ ಗಳಿಸಿ ತಂಡವನ್ನು 161/9 ಕ್ಕೆ ತಲುಪಿಸಿದರು. ಅವರು ಟಿ20 ವಿಶ್ವಕಪ್‌ನಲ್ಲಿ ಅರ್ಧಶತಕ ಗಳಿಸಿದ
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಅಮೆರಿಕ ವಿರುದ್ಧದ ಮೊದಲ ಪಂದ್ಯದೊಂದಿಗೆ 2026 ರ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ತನ್ನ ಅಭಿಯಾನವನ್ನು ಆರಂಭಿಸಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ ತಂಡವು ನಿರಾಶಾದಾಯಕ ಆರಂಭ ಪಡೆದುಕೊಂಡಿತು. ಪವರ್‌ಪ್ಲೇನಲ್ಲಿಯೇ ತಂಡವು ಪ್ರಮುಖ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡಿತು.
ಆರಂಭಿಕ ಜೋಡಿ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಬೇಗನೆ ವಿಕೆಟ್ ಒಪ್ಪಿಸಿದರು. ಪರಿಣಾಮವಾಗಿ ಆರನೇ ವಿಕೆಟ್ ಪತನಕ್ಕೆ ತಂಡದ ಸ್ಕೋರ್ಬೋರ್ಡ್ನಲ್ಲಿ ಇದಿದ್ದು ಕೇವಲ 77 ರನ್. ಈ ಹಂತದಲ್ಲಿ, ಅಮೆರಿಕದ ಬೌಲರ್‌ಗಳು ಅದ್ಭುತ ಪ್ರದರ್ಶನ ನೀಡಿ ಒತ್ತಡವನ್ನು ಕಾಯ್ದುಕೊಂಡಿದ್ದರಿಂದ ಭಾರತ ತಂಡವು ತೀವ್ರ ಸಂಕಷ್ಟಕ್ಕೆ ಸಿಲುಕಿತು. ಆದಾಗ್ಯೂ, ನಾಯಕ ಸೂರ್ಯಕುಮಾರ್ ಯಾದವ್ ಏಕಾಂಗಿ ಹೋರಾಟ ನೀಡಿ ಅರ್ಧಶತಕದ ಇನ್ನಿಂಗ್ಸ್ ಆಡಿದರು.
ಒಂದೆಡೆ ಒಂದರ ಹಿಂದೆ ಒಂದರಂತೆ ವಿಕೆಟ್ ಉರುಳುತ್ತಿರುವಾಗ ಎಚ್ಚರಿಕೆಯಿಂದ ಬ್ಯಾಟಿಂಗ್ ಮಾಡಿದ ನಾಯಕ ಸೂರ್ಯಕುಮಾರ್ ತಂಡದ ಇನ್ನಿಂಗ್ಸ್ ಸ್ಥಿರಗೊಳಿಸಿದರು. ಇದರ ಜೊತೆಗೆ ಸೂರ್ಯಕುಮಾರ್ ಕೇವಲ 37 ಎಸೆತಗಳಲ್ಲಿ ಏಳು ಬೌಂಡರಿ ಮತ್ತು ಒಂದು ಸಿಕ್ಸರ್ ಸಹಾಯದಿಂದ ಅರ್ಧಶತಕ ಪೂರೈಸಿದರು. ಹಾಗೆಯೇ ತಂಡವನ್ನು ಕೂಡ 100 ರನ್‌ಗಳ ಗಡಿ ದಾಟಿಸಿದರು.
ಪವರ್‌ಪ್ಲೇನಲ್ಲಿಯೇ ಬ್ಯಾಟಿಂಗ್ಗೆ ಬಂದ ಸೂರ್ಯಕುಮಾರ್ ಯಾದವ್ 49 ಎಸೆತಗಳಲ್ಲಿ 10 ಬೌಂಡರಿ ಮತ್ತು 4 ಸಿಕ್ಸರ್‌ಗಳ ಸಹಾಯದಿಂದ 84 ರನ್ ಬಾರಿಸಿ ಅಜೇಯರಾಗಿ ಉಳಿದರು. ಸೂರ್ಯಕುಮಾರ್ ಅವರ ಈ 84 ರನ್‌ಗಳ ಕಾಣಿಕೆಯಿಂದ ಭಾರತ ತಂಡ 20 ಓವರ್‌ಗಳಲ್ಲಿ 9 ವಿಕೆಟ್‌ಗಳ ನಷ್ಟಕ್ಕೆ 161 ರನ್ ಗಳಿಸುವಲ್ಲಿ ಯಶಸ್ವಿಯಾಯಿತು. ಸೂರ್ಯಕುಮಾರ್ ಹೊರತುಪಡಿಸಿ ತಂಡದ ಬೇರೆ ಯಾವುದೇ ಬ್ಯಾಟ್ಸ್‌ಮನ್ 30 ರನ್ ಗಳಿಸಲು ಸಾಧ್ಯವಾಗಲಿಲ್ಲ.
ಈ ಇನ್ನಿಂಗ್ಸ್‌ನೊಂದಿಗೆ, ಸೂರ್ಯಕುಮಾರ್ ಯಾದವ್ ಕೂಡ ವಿಶೇಷ ಪಟ್ಟಿಗೆ ಸೇರಿದರು. ಟಿ20 ವಿಶ್ವಕಪ್‌ನಲ್ಲಿ ಅರ್ಧಶತಕ ಬಾರಿಸಿದ ಮೂರನೇ ಭಾರತೀಯ ನಾಯಕ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾದರು. ಇದಕ್ಕೂ ಮೊದಲು, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಮಾತ್ರ ಈ ಸಾಧನೆ ಮಾಡಿದ್ದರು. ವಿರಾಟ್ ಒಮ್ಮೆ 50 ರನ್‌ಗಳ ಗಡಿ ತಲುಪಿದರೆ, ರೋಹಿತ್ ನಾಯಕನಾಗಿ ನಾಲ್ಕು ಬಾರಿ 50 ರನ್‌ಗಳ ಗಡಿ ದಾಟಿದ್ದಾರೆ.














Comments