• Jan 02, 2026
  • NPN Log
    Karnataka Weather: ಹೊಸ ವರ್ಷದ ಕೊಡುಗೆಯೆಂಬಂತೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದ್ದು, ಇಂದೂ ಸಹ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಸಮತೋಲನ ಆಹಾರ ಸೇವನೆಯೊಂದಿಗೆ ಬೆಚ್ಚನೆಯ ಉಡುಪು ಧರಿಸುವಂತೆ ಸಾರ್ವಜನಿಕರಿಗೆ ಸಲಹೆ ನೀಡಲಾಗಿದೆ. ಬೆಂಗಳೂರು, ಜನವರಿ 02: ಎರಡು ದಿನಗಳಿಂದ ದಕ್ಷಿಣ ಒಳನಾಡಿನ ಕೆಲವೆಡೆ ಲಘು ಮಳೆಯಾಗುವ (Weather Forecast) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿತ್ತು. ಹಾಗೆಯೇ ಇಂದೂ ಸಹ ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಮಳೆ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನ ತಾಪಮಾನದಲ್ಲಿ ಅಷ್ಟೇನೂ ಸುಧಾರಣೆಯಿಲ್ಲದ ಕಾರಣ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ವರ್ಷಾಂತ್ಯದ ವರೆಗೂ ರಾಜ್ಯದಲ್ಲಿ ಒಣ ಹವೆಯೇ ಇರಲಿದ್ದು, ಹೊಸ ವರ್ಷಕ್ಕೆ ವರುಣಾರ್ಭಟವಿರಬಹುದೆಂದು ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಒಣಹವೆ? ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿಯಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ ಇರಲಿದೆ. ಬೆಂಗಳೂರಿನಲ್ಲಿ ಮಂಜು ಬೆಂಗಳೂರಿನಲ್ಲಿ ಇಂದು ಮಂಜು ಕವಿದ ವಾತಾವರಣವಿದ್ದು, ತಾಪಮಾನ ಕನಿಷ್ಠ 16°C ಇದ್ದು, ಗರಿಷ್ಠ 28°C ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ.

    You Might Also Like

    Comments

    Leave A Comment

    Don’t worry ! Your email address will not be published. Required fields are marked (*).

    Get Newsletter

    Featured News

    Advertisement

    Voting Poll (Checkbox)

    Voting Poll (Radio)

    Readers Opinion