• Feb 14, 2026
  • NPN Log
    ಲೋಕಸಭೆಯಲ್ಲಿ ಇಂದು ರಾಹುಲ್ ಗಾಂಧಿಯವರ ಭಾಷಣ ಮುಗಿದ ನಂತರ ಪ್ರತಿಕ್ರಿಯೆ ನೀಡಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಭಾರತವನ್ನು ಯಾರೂ ಮಾರಾಟ ಮಾಡಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷವು ದೇಶವನ್ನು ದುರ್ಬಲಗೊಳಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಭಾರತದ ಅತ್ಯಂತ ಬಲಿಷ್ಠ ಪ್ರಧಾನಿ. ಭಾರತ ಪ್ರಗತಿ ಹೊಂದುತ್ತಿರುವುದರಿಂದ ಕಾಂಗ್ರೆಸ್ ದುಃಖಿತವಾಗಿದೆ ಎಂದು ಹೇಳಿದ್ದಾರೆ. ಇಂದು ಸದನದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಬಿಜೆಪಿ ಸಚಿವ ಕಿರಣ್ ರಿಜಿಜು ನಡುವೆ ತೀವ್ರ ವಾಕ್ಸಮರ ನಡೆಯಿತು. ನವದೆಹಲಿ, ಫೆಬ್ರವರಿ 11: ಲೋಕಸಭಾ ಅಧಿವೇಶನದಲ್ಲಿ ಇಂದು (ಬುಧವಾರ) ಭಾಷಣದ ವೇಳೆ ಭಾರತ-ಯುಎಸ್ ವ್ಯಾಪಾರ ಒಪ್ಪಂದದ ಕುರಿತು ಕಾಂಗ್ರೆಸ್ ಸಂಸದ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ಹೇಳಿಕೆಗೆ ಸಂಬಂಧಿಸಿದಂತೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡುವೆ ಮಾತಿನ ಚಕಮಕಿ ನಡೆಯಿತು. ಅಮೆರಿಕದ ಒತ್ತಡಕ್ಕೆ ಮೋದಿ ಸರ್ಕಾರ ಶರಣಾಗಿದೆ. ಮೋದಿ ಸರ್ಕಾರ ಅಮೆರಿಕಕ್ಕೆ ಭಾರತ ಮಾತೆಯನ್ನು ಮಾರಾಟ ಮಾಡಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಇದಕ್ಕೆ ಸರ್ಕಾರದ ಕಡೆಯಿಂದ ಮತ್ತು ಸ್ಪೀಕರ್ ಅವರಿಂದ ವಿರೋಧ ವ್ಯಕ್ತವಾಯಿತು. ಸದನದ ನಿಯಮಗಳನ್ನು ಉಲ್ಲಂಘಿಸಿದ್ದಕ್ಕೆ ಸದನದಲ್ಲಿ ಗದ್ದಲ ಭುಗಿಲೆದ್ದಿತು. ಈ ವೇಳೆ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಕಿರಣ್ ರಿಜಿಜು, “ನೀವು ಯಾವುದೇ ಪುರಾವೆಗಳಿಲ್ಲದೆ ಆರೋಪಗಳನ್ನು ಹೊರಿಸುತ್ತಿದ್ದೀರಿ. ಅದು ಸ್ವೀಕಾರಾರ್ಹವಲ್ಲ. ನಿಮ್ಮ ಆರೋಪಗಳಿಗೆ ಸಾಕ್ಷಿ ನೀಡಿ. ಭಾರತ ಮಾರಾಟಕ್ಕಿಲ್ಲ. ಕಾಂಗ್ರೆಸ್ ಪಕ್ಷವು ದೇಶವನ್ನು ದುರ್ಬಲಗೊಳಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಭಾರತದ ಅತ್ಯಂತ ಬಲಿಷ್ಠ ಪ್ರಧಾನಿ. ಭಾರತ ಪ್ರಗತಿ ಹೊಂದುತ್ತಿರುವುದರಿಂದ ಕಾಂಗ್ರೆಸ್ ದುಃಖಿತವಾಗಿದೆ” ಎಂದು ಹೇಳಿದರು. ಇದೇ ವೇಳೆ ಸ್ಪೀಕರ್ ಕುರ್ಚಿಯಲ್ಲಿ ಕುಳಿತಿದ್ದ ಜಗದಾಂಬಿಕಾ ಪಾಲ್ ರಾಹುಲ್ ಗಾಂಧಿಯವರ ಆರೋಪಗಳನ್ನು ಲೋಕಸಭೆಯ ದಾಖಲೆಯಲ್ಲಿ ಸೇರಿಸಲಾಗುವುದಿಲ್ಲ ಎಂದು ತೀರ್ಪು ನೀಡಿದರು. ಅಧಿವೇಶನದ ಬಳಿಕ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಚಿವ ಕಿರಣ್ ರಿಜಿಜು, ರಾಹುಲ್ ಗಾಂಧಿ ವಿರುದ್ಧ ಸರ್ಕಾರ ಹಕ್ಕುಚ್ಯುತಿ ನೋಟಿಸ್ ಸಲ್ಲಿಸಲಿದೆ. ಅವರು ಸದನವನ್ನು ದಾರಿ ತಪ್ಪಿಸಿದ್ದಾರೆ ಮತ್ತು ಆಧಾರರಹಿತ ಆರೋಪಗಳನ್ನು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

    You Might Also Like

    Comments

    Leave A Comment

    Don’t worry ! Your email address will not be published. Required fields are marked (*).

    Get Newsletter

    Featured News

    Advertisement

    Voting Poll (Checkbox)

    Voting Poll (Radio)

    Readers Opinion